Leviticus 26:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಿಗೋಸ್ಕರ ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದೆನು. ಬೇರೆ ಜನಾಂಗಗಳವರು ಆ ಸಂಗತಿಗಳನ್ನು ನೋಡಿದರು. ನಾನೇ ಯೆಹೋವನು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.
Kannada BSI Bible 2016
ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.
Kannada Bible (KNCL) BSI 2016
ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”