Leviticus 26:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಇಸ್ರೇಲರಿಗೆ ಕೊಟ್ಟ ಕಟ್ಟಳೆಗಳು, ನಿಯಮಗಳು ಮತ್ತು ಉಪದೇಶಗಳು ಇವೇ. ಇದು ಯೆಹೋವನ ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಯ ನಿಯಮಗಳಾಗಿವೆ. ಯೆಹೋವನು ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಕೊಟ್ಟನು. ಮೋಶೆಯು ಅವುಗಳನ್ನು ಜನರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.
Kannada BSI Bible 2016
ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ಯರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಮೇಲೆ ಕಂಡವುಗಳೇ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.