Leviticus 26:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಣ ತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
Kannada BSI Bible 2016
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;
Kannada Bible (KNCL) BSI 2016
ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.