Leviticus 26:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆನು. ಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
Kannada BSI Bible 2016
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.
Kannada Bible (KNCL) BSI 2016
ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.