Leviticus 26:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
Kannada BSI Bible 2016
ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
Kannada Bible (KNCL) BSI 2016
ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.