Leviticus 27:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಅದನ್ನು ಪ್ರತಿಷ್ಠಿಸಿದ ವ್ಯಕ್ತಿ ಅದನ್ನು ಯೆಹೋವನಿಗೆ ಅರ್ಪಿಸುತ್ತೇನೆಂದು ಹರಕೆ ಮಾಡಿರುತ್ತಾನೆ. ಆದ್ದರಿಂದ ಅವನು ಅದರ ಬದಲು ಇನ್ನೊಂದು ಪಶುವನ್ನು ಕೊಡಲು ಪ್ರಯತ್ನಿಸಬಾರದು; ಅದನ್ನು ಬದಲಾಯಿಸಲು ಪ್ರಯತ್ನಿಸಬಾರದು. ಅವನು ಒಳ್ಳೆಯ ಪಶವಿನ ಬದಲಾಗಿ ಕೆಟ್ಟ ಪಶುವನ್ನು ಕೊಡಲು ಪ್ರಯತ್ನಿಸಬಾರದು. ಅವನು ಪಶುಗಳನ್ನು ಬದಲಾಯಿಸಲು ಪ್ರಯತ್ನಿಸಿದರೆ, ಆ ಎರಡು ಪಶುಗಳೂ ಪವಿತ್ರವಾಗುತ್ತವೆ. ಅವೆರಡೂ ಯೆಹೋವನದಾಗಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
Kannada BSI Bible 2016
ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಬದಲಾಯಿಸಕೂಡದು; ಕೆಟ್ಟದ್ದಕ್ಕೆ ಬದಲಾಗಿ ಒಳ್ಳೇದನ್ನೂ ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನೂ ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಕೂಡದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ ಮೊದಲನೆಯ ಪಶುವೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನವಾಗಿರಬೇಕು.
Kannada Bible (KNCL) BSI 2016
ಅದನ್ನು ಬದಲಾಯಿಸಕೂಡದು. ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನು, ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಹಾಗು ಒಂದಕ್ಕೆ ಬದಲಾಗಿ ಮತ್ತೊಂದನ್ನು ಕೊಡಕೂಡದು. ಅವನು ಗೊತ್ತುಮಾಡಿದ ಪ್ರಾಣಿಗೆ ಬದಲಾಗಿ ಬೇರೊಂದು ಪ್ರಾಣಿಯನ್ನು ಪ್ರತ್ಯೇಕಿಸಿಟ್ಟಿದ್ದರೆ ಮೊದಲನೆಯ ಪ್ರಾಣಿ ಹಾಗು ಅದಕ್ಕೆ ಬದಲಾಗಿ ಇಟ್ಟ ಪ್ರಾಣಿ ಎರಡೂ ಸರ್ವೇಶ್ವರನಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.