Leviticus 27:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಆ ಪಶುವಿಗೆ ಬೆಲೆಯನ್ನು ಗೊತ್ತುಮಾಡುವನು. ಪಶುವು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
Kannada BSI Bible 2016
ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಒಳ್ಳೇದೋ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಸ್ಥಿರವಾಗಿರುವದು.
Kannada Bible (KNCL) BSI 2016
ಅದು ಒಳ್ಳೆಯದೊ ಕೆಟ್ಟದ್ದೋ ಎಂದು ಯಾಜಕನು ನೋಡಿ ಅದರ ಬೆಲೆ ಇಷ್ಟೆಂದು ನಿರ್ಧರಿಸಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಅಂತಿಮವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.