Leviticus 27:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹರಕೆ ಮಾಡಿದವನು ಪಶುವನ್ನು ಮರಳಿ ಕೊಂಡುಕೊಳ್ಳಬೇಕೆಂದಿದ್ದರೆ, ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
Kannada BSI Bible 2016
ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹರಕೆ ಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.
Kannada Bible (KNCL) BSI 2016
ಹರಕೆ ಮಾಡುವವನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.