Leviticus 27:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಒಬ್ಬನು ಜ್ಯೂಬಿಲಿಯ ನಂತರ ತನ್ನ ಹೊಲವನ್ನು ಕೊಟ್ಟರೆ, ಯಾಜಕನು ಅದರ ಸರಿಯಾದ ಬೆಲೆಯನ್ನು ಲೆಕ್ಕಹಾಕಬೇಕು. ಅವನು ಮುಂದಿನ ಜ್ಯೂಬಿಲಿ ಸಂವತ್ಸರಕ್ಕೆ ಇರುವ ವರ್ಷಗಳನ್ನು ಲೆಕ್ಕಹಾಕಿ ಅದರಿಂದ ಬೆಲೆಯನ್ನು ನಿರ್ಣಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
Kannada BSI Bible 2016
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೂಬಿಲಿ ಸಂವತ್ಸರದ ತರುವಾಯ ಭೂವಿುಯನ್ನು ಹರಕೆಮಾಡಿದರೆ ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರುಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕವ್ಮಿುಮಾಡಬೇಕು.
Kannada Bible (KNCL) BSI 2016
ಜೂಬಿಲಿ ಸಂವತ್ಸರದ ತರುವಾಯ ಭೂಮಿಯನ್ನು ಹರಕೆ ಮಾಡಿದರೆ, ಮುಂದಿನ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಮ್ಮಿಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.