Leviticus 27:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೊಲವನ್ನು ಕೊಟ್ಟವನು ಅದನ್ನು ಮರಳಿ ಕೊಂಡುಕೊಳ್ಳಬೇಕೆಂದು ಬಯಸುವುದಾದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿ ಕೊಡಬೇಕು. ಆಗ ಹೊಲವು ತಿರುಗಿ ಅವನದಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
Kannada BSI Bible 2016
ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವದು.
Kannada Bible (KNCL) BSI 2016
ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಲಾಶಿಸಿದರೆ, ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಹೊಲ ಅವನದಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.