Leviticus 27:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -
Kannada Bible (KNCL) BSI 2016
“ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.