Leviticus 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
Kannada BSI Bible 2016
ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
Kannada Bible (KNCL) BSI 2016
ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.