Leviticus 27:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಮುಂದಿನ ಜ್ಯೂಬಿಲಿ ಸಂವತ್ಸರದವರೆಗೆ ಇರುವ ವರ್ಷಗಳನ್ನು ಲೆಕ್ಕ ಹಾಕಿ ಅದರ ಬೆಲೆಯನ್ನು ನಿಗದಿ ಮಾಡಬೇಕು. ಆಗ ಭೂಮಿಯು ಯೆಹೋವನದಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
Kannada BSI Bible 2016
ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರುಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
Kannada Bible (KNCL) BSI 2016
ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.