Leviticus 27:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಆ ಬೆಲೆಗಳನ್ನು ಕೊಡಬೇಕು. ಒಂದು ಶೆಕೆಲ್‌ನ ಬೆಲೆಯನ್ನು ಇಪ್ಪತ್ತು ಗೇರಾ ತೂಕದ ಪ್ರಕಾರ ನೀವು ಯಾವಾಗಲೂ ನಿರ್ಣಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
Kannada BSI Bible 2016
ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಸೇವೆಯಲ್ಲಿ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ನೀವು ಬೆಲೆಯನ್ನು ಯಾವಾಗಲೂ ನಿರ್ಣಯಿಸಬೇಕು.
Kannada Bible (KNCL) BSI 2016
ದೇವರ ಸೇವೆಯಲ್ಲಿ ಬಳಕೆಯಲ್ಲಿರುವ ‘ಶೆಕೆಲ್’ ಒಂದಕ್ಕೆ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಬೆಲೆಯನ್ನು ನಿಗದಿಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.