Leviticus 27:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
Kannada BSI Bible 2016
ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಶುದ್ಧ] ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು; ಹೋರಿಯಾಗಿದ್ದರೂ ಆಡುಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
Kannada Bible (KNCL) BSI 2016
“ಶುದ್ಧಪ್ರಾಣಿಯಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಸರ್ವೇಶ್ವರನಿಗೆ ಸೇರಿದ್ದು. ಆದ್ದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು. ಚೊಚ್ಚಲು ಮರಿ ಹೋರಿಯೇ ಆಗಿರಲಿ, ಆಡುಕುರಿಯೇ ಆಗಿರಲಿ. ಅದು ಸರ್ವೇಶ್ವರನ ಸೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.