Leviticus 27:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
Kannada BSI Bible 2016
ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಶುವು ಒಳ್ಳೇದೋ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲಾಗಿ ಲೆಕ್ಕಿಸಿದ್ದೂ ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನವಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ.
Kannada Bible (KNCL) BSI 2016
ಆ ಪಶುಪ್ರಾಣಿ ಒಳ್ಳೆಯದೋ ಕೆಟ್ಟದ್ದೋ ಎಂದು ನೋಡಬಾರದು. ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದು ಹಾಗು ಅದಕ್ಕೆ ಬದಲಾಗಿ ಇಟ್ಟಿದ್ದು ಎರಡು ಸರ್ವೇಶ್ವರನದಾಗಿರಬೇಕು. ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.“
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ”