Leviticus 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
Kannada BSI Bible 2016
ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.
Kannada Bible (KNCL) BSI 2016
“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.