Leviticus 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಕೋಶದ ಮೇಲೆ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ಯಾಜಕನು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ಸಮಾಧಾನಯಜ್ಞವನ್ನು ಅರ್ಪಿಸುವ ಕ್ರಮ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
Kannada BSI Bible 2016
ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಮೇಲೆ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ
Kannada Bible (KNCL) BSI 2016
ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಮತ್ತು ಕಾಳಿಜದ ಉತ್ತಮ ಭಾಗವನ್ನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.