Leviticus 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
Kannada BSI Bible 2016
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.
Kannada Bible (KNCL) BSI 2016
ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.