Leviticus 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅದರ ಎರಡು ಮೂತ್ರಪಿಂಡಗಳನ್ನು ಮತ್ತು ಸೊಂಟದವರೆಗೆ ಅವುಗಳನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಪಿತ್ತಾಶಯವನ್ನು ಮತ್ತು ಅದನ್ನು ಅವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಮೂತ್ರಪಿಂಡಗಳೊಂದಿಗೆ ಪಿತ್ತಾಶಯವನ್ನೂ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
Kannada BSI Bible 2016
ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
Kannada Bible (KNCL) BSI 2016
ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ಸರ್ವೇಶ್ವರನಿಗೆ ಅಗ್ನಿಯ ಮೂಲಕ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.