Leviticus 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
Kannada BSI Bible 2016
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
Kannada Bible (KNCL) BSI 2016
ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.