Leviticus 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
Kannada BSI Bible 2016
ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ್ರವ್ಯದ ಮೇಲೆಯೇ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮವಾಗಿರುವದು.
Kannada Bible (KNCL) BSI 2016
ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.