Leviticus 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
Kannada BSI Bible 2016
ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
Kannada Bible (KNCL) BSI 2016
“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.