Leviticus 3:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
Kannada BSI Bible 2016
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.
Kannada Bible (KNCL) BSI 2016
ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.