Leviticus 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಈ ಭಾಗಗಳನ್ನು ಸಮಾಧಾನಯಜ್ಞ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
Kannada BSI Bible 2016
ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನೆಲ್ಲಾ ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮವೇದಿಯ ಮೇಲೆ ಹೋಮಮಾಡಬೇಕು.
Kannada Bible (KNCL) BSI 2016
ಶಾಂತಿಸಮಾಧಾನದ ಬಲಿಪ್ರಾಣಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲೂ ಪ್ರತ್ಯೇಕಿಸಿ, ದಹನಬಲಿಪೀಠದ ಮೇಲೆ ಹೋಮಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.