Leviticus 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪಾಪದ ಕುರಿತು ಅವರಿಗೆ ತಿಳಿದುಬಂದರೆ ಆಗ ಅವರು ಒಂದು ಹೋರಿಯನ್ನು ಇಡೀ ಜನಾಂಗದ ಪಾಪಪರಿಹಾರ ಮಾಡುವ ಸಮರ್ಪಣೆಯಾಗಿ ಅರ್ಪಿಸಬೇಕು. ಅವರು ಹೋರಿಯನ್ನು ದೇವದರ್ಶನಗುಡಾರಕ್ಕೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
Kannada BSI Bible 2016
ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದನಂತರ ಅದನ್ನು ಪರಿಹರಿಸಿಕೊಳ್ಳುವದಕ್ಕಾಗಿ [ಪೂರ್ಣಾಂಗವಾದ] ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತರಿಸಿದಾಗ
Kannada Bible (KNCL) BSI 2016
ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಹೋರಿಯೊಂದನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಿದಾಗ ಸಮಾಜದ ಹಿರಿಯರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.