Leviticus 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada BSI Bible 2016
ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada Bible (KNCL) BSI 2016
ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.