Leviticus 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
Kannada BSI Bible 2016
ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]
Kannada Bible (KNCL) BSI 2016
“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು: