Leviticus 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.