Leviticus 4:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
Kannada BSI Bible 2016
ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ.
Kannada Bible (KNCL) BSI 2016
ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.