Leviticus 4:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
Kannada BSI Bible 2016
ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
Kannada Bible (KNCL) BSI 2016
ತನ್ನ ತಪ್ಪು ತನಗೆ ತಿಳಿದು ಬಂದಾಗ ದೋಷಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.