Leviticus 4:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada BSI Bible 2016
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada Bible (KNCL) BSI 2016
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.