Leviticus 4:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.