Leviticus 4:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada BSI Bible 2016
ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada Bible (KNCL) BSI 2016
ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.