Leviticus 4:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯಜ್ಞವೇದಿಯಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.