Leviticus 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
Kannada BSI Bible 2016
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರಸ್ಥಾನದ ಮುಂದಣ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿವಿುಕಿಸಬೇಕು.
Kannada Bible (KNCL) BSI 2016
ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.