Leviticus 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada BSI Bible 2016
ಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Kannada Bible (KNCL) BSI 2016
ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.