Leviticus 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
Kannada BSI Bible 2016
ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ
Kannada Bible (KNCL) BSI 2016
ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮಭಾಗವನ್ನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.