Leviticus 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.