Leviticus 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.
Kannada BSI Bible 2016
ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೇವಾರ್ಪಿತವೆಂದು ಸೂಚಿಸುವದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕಯಜ್ಞ.
Kannada Bible (KNCL) BSI 2016
ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.