Leviticus 5:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
Kannada BSI Bible 2016
ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು.
Kannada Bible (KNCL) BSI 2016
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”