Leviticus 5:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
Kannada BSI Bible 2016
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.