Leviticus 5:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.