Leviticus 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
Kannada BSI Bible 2016
ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.
Kannada Bible (KNCL) BSI 2016
ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.