Leviticus 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವನ್ನಾಗಲಿ ಅಥವಾ ಬೇರೆ ಯಾವ ಅಶುದ್ಧ ವಸ್ತುವನ್ನಾಗಲಿ ಮುಟ್ಟಿದರೆ ತಾನು ಮುಟ್ಟಿದ್ದು ತಿಳಿಯದಿದ್ದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
Kannada BSI Bible 2016
ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆಹೋದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.
Kannada Bible (KNCL) BSI 2016
“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.