Leviticus 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
Kannada BSI Bible 2016
ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
Kannada Bible (KNCL) BSI 2016
“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.