Leviticus 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
Kannada BSI Bible 2016
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.
Kannada Bible (KNCL) BSI 2016
ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.