Leviticus 5:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು. ತಿಳಿಯದೆ ಮಾಡುವ ಪಾಪಗಳು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.