Leviticus 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಪಾಪಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
Kannada BSI Bible 2016
ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿವಿುಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರಕಯಜ್ಞ.
Kannada Bible (KNCL) BSI 2016
ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.