Leviticus 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
Kannada BSI Bible 2016
ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು ಮಾನರಕ್ಷಕವಾದ ನಾರಿನ ಚಡ್ಡಿಯನ್ನು ಹಾಕಿಕೊಂಡು ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ವೇದಿಯ ಬಳಿಯಲ್ಲಿ ಇಡಬೇಕು.
Kannada Bible (KNCL) BSI 2016
ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.